ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ 12 ಜನರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸುವಂತೆ ಎನ್‌ಸಿಬಿ ಇಂಟರ್‌ಪೋಲ್‌ಗೆ ಮನವಿ ಸಲ್ಲಿಸಿದೆ ಎಂದು ವರದಿಯಾಗಿದೆ.
ಹಸೀನಾ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದ ವೇಳೆ ಸುಮಾರು 753 ಜನ ಮೃತಪಟ್ಟು, ಸಾವಿರಾರು ಮಂದಿ ಗಾಯಗೊಂಡಿದ್ದರು. ಈ ಕ್ರಮವನ್ನು ದೇಶದ ಜನರ ಮೇಲೆ ನಡೆಸಿದ ನರಮೇಧ ಎಂದು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮುಹಮ್ಮದ್ ಯೂನಸ್ ಹೇಳಿದ್ದರು.
ನರಮೇಧ ಆರೋಪದ ಮೇಲೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಹಸೀನಾ ಹಾಗೂ ಮಾಜಿ ಸಚಿವರು, ಸಲಹೆಗಾರರ ವಿರುದ್ದ ಬಂಧನ ವಾರಂಟ್ ಹೊರಡಿಸಿತ್ತು.
ಈ ಘಟನೆಯ ನಂತರ ಹಸೀನಾ 2024ರ ಆಗಸ್ಟ್ 5ರಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಭಾರತಕ್ಕೆ ಪಲಾಯನ ಮಾಡಿದ್ದರು.
ರೆಡ್ ಕಾರ್ನರ್ ನೋಟಿಸ್ ಅಂದರೆ ಏನು?
ಅಪರಾಧ ಕೃತ್ಯಗಳಲ್ಲಿ ಬೇಕಾಗಿರುವ ಮತ್ತು ಗಡೀಪಾರಿನ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯ ಪತ್ತೆ ಮತ್ತು ಬಂಧನಕ್ಕೆ ಸಹಕಾರ ಕೋರಿ ಹೊರಡಿಸಲಾಗುವ ನೋಟಿಸ್.