ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲವು ರಾಜಕೀಯ ನಾಯಕರ ವಿರುದ್ಧ ಆಕ್ಷೇಪಾರ್ಹ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದ ತೆಲುಗು ನಟಿ ಶ್ರೀ ರೆಡ್ಡಿ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶ್ರೀ ರೆಡ್ಡಿ ವಿಜಯನಗರಂ ಪೊಲೀಸರ ಮುಂದೆ ಹಾಜರಾಗಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸೇರಿದಂತೆ ಹಲವು ರಾಜಕೀಯ ನಾಯಕರ ವಿರುದ್ಧ ಆಕ್ಷೇಪಾರ್ಹ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ರಾಜಕೀಯ ನಾಯಕರಿಗೆ ನಟಿ ಅಸಭ್ಯ ಭಾಷೆ ಮತ್ತು ಅಶ್ಲೀಲ ಪದಗಳನ್ನು ಬಳಸಿದ್ದರು ಎನ್ನಲಾಗಿದೆ.
ಚಂದ್ರಬಾಬು ನಾಯ್ಡು ಸರ್ಕಾರ ಅಧಿಕಾರಕ್ಕೆ ಬಂದ ನಂತರ, ತಮ್ಮ ನಿಲುವನ್ನು ಬದಲಾಯಿಸಿಕೊಂಡು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದರು, ಮುಂದೆ ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಅವರು ಪ್ರತಿಜ್ಞೆ ಮಾಡಿದ್ದರು.
ಆಕೆಯ ಕ್ಷಮೆಯಾಚನೆಯ ಹೊರತಾಗಿಯೂ, ತೆಲುಗು ದೇಶಂ ಪಕ್ಷದ ಕಾರ್ಯಕರ್ತರು ಆಕೆಯ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದರು.