ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ 4 ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಪ್ರತಿ ಗಂಟೆಗೆ 30-50 ಕಿಮೀ ವೇಗದಲ್ಲಿ ಗಾಳಿ ಬಿಸಲಿದೆ. ಮುಂದಿನ 2 ದಿನ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.