ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳ ಹಠಾತ್ ವರ್ಗಾವಣೆ ವಿರೋಧಿಸಿ ಬೆಂಗಳೂರು ವಕೀಲರ ಸಂಘ (ಎಎಬಿ), ಹೈಕೋರ್ಟ್‌ನ ಹಿರಿಯ ವಕೀಲರು ಮಂಗಳವಾರ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದಾರೆ.
ವರ್ಗಾವಣೆ ಶಿಫಾರಸಿಗೆ ಸಂಬಂಧಿಸಿದಂತೆ ಹೈಕೋರ್ಟ್‌ನ, ಅಂತಾರಾಷ್ಟ್ರೀಯ ನ್ಯಾಯಪಂಡಿತರ ಆಯೋಗ ಸಭಾಂಗಣದಲ್ಲಿ ಇಂದು ಕರೆಯಲಾಗಿದ್ದ ಪದಾಂಕಿತ ಹಿರಿಯ ವಕೀಲರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ವರ್ಗಾವಣೆಯ ಶಿಫಾರಸು ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವ ಸಲುವಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.