ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.
ಸಮಾರು 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಇವರೆಲ್ಲರಿಗೂ ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ದಾಳಿಯ ಹೊಣೆಯನ್ನು ಭಯೋತ್ಪಾದಕ ಸಂಘಟನೆ ಟಿಆರ್ಎಫ್ ( ದಿ ರೆಸಿಸ್ಟೆನ್ಸ್ ಫ್ರಂಟ್) ಹೊತ್ತುಕೊಂಡಿದೆ.
ಘಟನಾ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಭಯೋತ್ಪಾದಕರ ಪತ್ತೆಗೆ ಎಲ್ಲೆಡೆ ಭದ್ರತಾ ಸಿಬ್ಬಂದಿಗಳು ಸಮರೋಪಾದಿಯಲ್ಲಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.