ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಎಲ್‌ಇಟಿ ಕಮಾಂಡರ್: ಗುಪ್ತಚರ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಹಲ್ಗಾಮ್‌ನ ಸುಂದರವಾದ ಬೈಸರನ್ ಹುಲ್ಲುಗಾವಲಿನಲ್ಲಿ ನಿನ್ನೆ ಮಧ್ಯಾಹ್ನ ಪ್ರವಾಸಿಗರ ಗುಂಪಿನ ಮೇಲೆ ಶಂಕಿತ ಭಯೋತ್ಪಾದಕರು ಗುಂಡು ಹಾರಿಸಿದ ಘಟನೆಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ 28 ಜನರು ಮೃತಪಟ್ಟಿದ್ದಾರೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾದ ಹಿರಿಯ ಕಮಾಂಡರ್, ಅಲಿಯಾಸ್ ಖಾಲಿದ್ ಎಂದೂ ಕರೆಯಲ್ಪಡುವ ಸೈಫುಲ್ಲಾ ಕಸೂರಿ ಈ ಹತ್ಯಾಕಾಂಡದ ಹಿಂದಿನ ಮಾಸ್ಟರ್ ಮೈಂಡ್ ಎಂದು ಗುಪ್ತಚರ ಸಂಸ್ಥೆಗಳು ಗುರುತಿಸಿವೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮೂಲದ ಇತರ ಇಬ್ಬರು ಕಾರ್ಯಕರ್ತರು ಈ ದಾಳಿಯನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ನಂಬಲಾಗಿದೆ. ನಿಷೇಧಿತ ಎಲ್‌ಇಟಿಯ ಒಂದು ಭಾಗವಾದ ದಿ ರೆಸಿಸ್ಟೆನ್ಸ್ ಫ್ರಂಟ್ ಸದಸ್ಯರು ಎಂದು ನಂಬಲಾದ ದಾಳಿಕೋರರು, ನಿರಾಯುಧ ಪ್ರವಾಸಿಗರ ಗುಂಪನ್ನು ಗುರಿಯಾಗಿಸಿಕೊಂಡು ಮಧ್ಯಾಹ್ನ 2:30 ರ ಸುಮಾರಿಗೆ ಹೊಂಚುದಾಳಿ ನಡೆಸಿದ್ದಾರೆ.

ಈ ಕ್ರೂರ ದಾಳಿಯು ದೇಶಾದ್ಯಂತ ಆಘಾತದ ಅಲೆಗಳನ್ನು ಎಬ್ಬಿಸಿದೆ, ಈ ಹತ್ಯೆ ರಾಷ್ಟ್ರವ್ಯಾಪಿ ಆಕ್ರೋಶ ಮತ್ತು ಶೋಕವನ್ನು ಹುಟ್ಟುಹಾಕಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾಕ್ಕೆ ತಮ್ಮ ರಾಜತಾಂತ್ರಿಕ ಭೇಟಿಯನ್ನು ಮೊಟಕುಗೊಳಿಸಿ ಇಂದು ಮುಂಜಾನೆ ದೆಹಲಿಗೆ ಮರಳಿದ್ದು ಸಂಪುಟ ಸದಸ್ಯರ ತುರ್ತು ಸಭೆ ಕರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!