ಸ್ವಗೃಹದಲ್ಲಿ ಮೃತ ಮಂಜುನಾಥ ರಾವ್ ಅಂತಿಮ ದರುಶನಕ್ಕೆ ವ್ಯವಸ್ಥೆ: ಅರ್ಧ ದಿನ ಮಲೆನಾಡು ಬಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ರಾವ್ ಮೃತದೇಹಕ್ಕೆ ಅವರ ನಿವಾಸದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನೆರವೇರುತ್ತಿವೆ.

ಇಂದು ಬೆಳಗ್ಗೆ ಮಂಜುನಾಥ್ ಮೃತದೇಹ ಶಿವಮೊಗ್ಗ ತಲುಪಿದ್ದು, ಸರ್ಕಾರದ ಪರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಅಂತಿಮ ದರುಶನ ಪಡೆದಿದ್ದಾರೆ. ಸಂಸದ ಬಿ ವೈ ರಾಘವೇಂದ್ರ ಸಹ ಮಂಜುನಾಥ್ ರಾವ್ ಅಂತಿಮ ದರುಶನ ಪಡೆದಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ದಾರುಣವಾಗಿ ಮೃತಪಟ್ಟಿರುವ ಮಂಜುನಾಥ ರಾವ್ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಇಂದು ಶಿವಮೊಗ್ಗದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ ಅರ್ಧ ದಿನ ಸ್ವಯಂಪ್ರೇರಿತ ಬಂದ್ ನಡೆಸಲಾಗುತ್ತಿದೆ.

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಮೃತಪಟ್ಟಿದ್ದು ಅವರು ಪತ್ನಿ ಮತ್ತು ಮಗನ ಜೊತೆ ಪ್ರವಾಸಕ್ಕೆ ಹೋಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!