March 18, 2026
Wednesday, March 18, 2026
spot_img

💰 | ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ನಿಜವಾಗತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ಬಜೆಟ್​ನಲ್ಲಿ ಕೃಷಿ ಕ್ಷೇತ್ರಕ್ಕೆ ಏನೆಲ್ಲಾ ಸಿಗಲಿದೆ? ಕೃಷಿಕರು ಬಜೆಟ್‌ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಬಜೆಟ್​ನಲ್ಲಿ ಕೃಷಿ ಕ್ಷೇತ್ರಕ್ಕೆ ವಿನಿಯೋಗಿಸುತ್ತಿರುವ ಹಣ ಕ್ರಮೇಣವಾಗಿ ಹೆಚ್ಚುತ್ತಾ ಬಂದಿದೆ. 2013-14ರಲ್ಲಿ ಕೃಷಿ ಕ್ಷೇತ್ರಕ್ಕೆ 21,933 ಕೋಟಿ ರೂ ನೀಡಲಾಗಿತ್ತು. 2025-26ರ ಬಜೆಟ್​ನಲ್ಲಿ 1.27 ಲಕ್ಷ ಕೋಟಿ ರೂಗಿಂತ ಹೆಚ್ಚಿನ ಮೊತ್ತವನ್ನು ಕೃಷಿಗೆ ವಿನಿಯೋಗಿಸಲಾಗಿದೆ. 2026-27ರ ಬಜೆಟ್​ನಲ್ಲಿ ಇದು 1.50 ಲಕ್ಷ ಕೋಟಿ ರೂ ಮುಟ್ಟುವ ನಿರೀಕ್ಷೆ ಇದೆ.

ಈ ಬಾರಿಯ ಬಜೆಟ್​ನಲ್ಲಿ ಕೃಷಿ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡಬಹುದು. ಪಿಎಂ ಕಿಸಾನ್, ಫಸಲ್ ಬಿಮಾ ಯೋಜನೆ, ಕೃಷಿ ಸಂಚಯಿ ಯೋಜನೆ ಇತ್ಯಾದಿ ಸ್ಕೀಮ್​ಗಳಿಗೆ ಹೆಚ್ಚಿನ ಫಂಡಿಂಗ್ ಬರುವ ಅಪೇಕ್ಷೆಗಳಿವೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಸರ್ಕಾರ ಪ್ರತೀ ವರ್ಷ ಮೂರು ಕಂತುಗಳಲ್ಲಿ ಒಟ್ಟು 6,000 ರೂ ಹಣವನ್ನು ರೈತರಿಗೆ ನೀಡುತ್ತದೆ. ಸುಮಾರು 9-10 ಕೋಟಿ ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಸರ್ಕಾರ ಪ್ರತೀ ಕಂತಿನ ಹಣಕ್ಕೆ ಸುಮಾರು 20,000 ಕೋಟಿ ರೂ ವ್ಯಯಿಸುತ್ತಿದೆ.

ಈಗ ಪಿಎಂ ಕಿಸಾನ್ ಹಣವನ್ನು ಡಬಲ್ ಮಾಡಿದರೆ ಸರ್ಕಾರಕ್ಕೆ ವರ್ಷಕ್ಕೆ 60,000 ಕೋಟಿ ರೂ ಹೆಚ್ಚುವರಿ ಹೊರೆ ಬೀಳುತ್ತದೆ. ಕೆಲ ವರದಿಗಳ ಪ್ರಕಾರ ಸ್ಕೀಮ್ ಮೊತ್ತವನ್ನು ಹೆಚ್ಚಿಸುವ ಸಾಧ್ಯತೆ ಕಡಿಮೆ. ಕಂತಿನ ಹಣ ಹೆಚ್ಚಿಸುವ ಯಾವ ಪ್ರಸ್ತಾಪವೂ ಇಲ್ಲ ಎಂದು ಈ ಹಿಂದೆ ಸರ್ಕಾರವೂ ಹೇಳಿದ್ದಿದೆ. ಇನ್ನೂ ಕೆಲ ವರದಿಗಳ ಪ್ರಕಾರ ಈ ವರ್ಷ ಯೋಜನೆಯಲ್ಲಿ ಒಂದು ಕಂತು ಹೆಚ್ಚಿಸಬಹುದು ಎನ್ನಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !