ಪಹಲ್ಗಾಮ್ ಉಗ್ರ ದಾಳಿ: ಶ್ರೀನಗರದಿಂದ 178 ಕನ್ನಡಿಗರು ಬೆಂಗಳೂರಿಗೆ ವಾಪಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭೀಕರ ಉಗ್ರ ದಾಳಿಯ ನಂತರ ಕಾಶ್ಮೀರದ ವಿವಿಧೆಡೆ ಸಿಲುಕಿದ್ದ ಸುಮಾರು 178 ಮಂದಿ ಕನ್ನಡಿಗರನ್ನು ಇದೀಗ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದಿದ್ದಾರೆ.

ಗುರುವಾರ ಮಧ್ಯಾಹ್ನ 12.30 ರ ಸುಮಾರಿಗೆ ಕನ್ನಡಿಗರನ್ನು ಒಳಗೊಂಡ ವಿಮಾನ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ದಾಳಿಯ ಮಾಹಿತಿ ದೊರೆಯುತ್ತಿದ್ದಂತೆಯೇ ಕರ್ನಾಟಕ ಸರ್ಕಾರ ಎರಡು ವಿಶೇಷ ತಂಡಗಳನ್ನು ಕಾಶ್ಮೀರಕ್ಕೆ ಕಳುಹಿಸಿಕೊಟ್ಟಿತ್ತು.

ಕಾರ್ಮಿಕ ಸಂತೋಷ್ ಅನಿಲ್ ಲಾಡ್ ನೇತೃತ್ವದಲ್ಲಿ ಕನ್ನಡಿಗರನ್ನು ವಾಪಸ್ ಕರೆತರುವ ಕಾರ್ಯಾಚರಣೆ ನಡೆಸಲಾಗಿತ್ತು. ಸಂಸದ ತೇಜಸ್ವಿ ಸೂರ್ಯ ಸಹ ಕಾಶ್ಮೀರದಲ್ಲಿ ರಕ್ಷಣಾ ತಂಡಕ್ಕೆ ಸಾಥ್ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!