ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಮೇಲೆ ಅಡ್ಡ ಬಂದ ನಾಯಿ ಜೀವ ಉಳಿಸುವ ಪ್ರಯತ್ನದಲ್ಲಿ ಟವೆರಾ ಕಾರು ರಸ್ತೆ ಬದಿಯ ಕಲ್ಲಿನ ಕಂಬಗಳಿಗೆ ಅಪ್ಪಳಿಸಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರು ಗ್ರಾಮದ ಬಳಿ ನಡೆದಿದೆ.
ಕಲಬುರಗಿಯ ಮಿಲ್ಲತ್ ನಗರದ ಆಯೇಷಾ (70), ಅಜ್ಮೇರಾ(30), ಜೈನಬ್(2) ಮೃತ ದುರ್ದೈವಿಗಳು. ಮಹಾರಾಷ್ಟ್ರ ಗಡಿಭಾಗದ ಹೈದ್ರಾ ದರ್ಗಾದಲ್ಲಿ ನಡೆಯುತ್ತಿದ್ದ ಸಂಬಂಧಿಕರ ಮಗುವಿನ ಜಾವಳ ಕಾರ್ಯಕ್ರಮಕ್ಕೆ ಟವೆರಾ ಕಾರಿನಲ್ಲಿ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.