ಹೊಸದಿಗಂತ ವರದಿ ಮುಂಡಗೋಡ:
ಮುಂಡಗೋಡ ಪಟ್ಟಣದಲ್ಲಿ ಜಾನುವಾರು ವಧೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ.
ದೇಶಪಾಂಡೆ ನಗರದ ಜಹೀರ್ ಅಹ್ಮದ್ ಬೇಪಾರಿ(32) ಬಂಧಿತ ಆರೋಪಿ.
ಗುರುವಾರ ಪಟ್ಟಣದ ಯಲ್ಲಾಪುರ ರಸ್ತೆಯ ರಜಾಕಿಯ ಮಸೀದಿ ಹಿಂಭಾಗದ ಖಾಲಿ ಜಾಗದಲ್ಲಿ ಜಾನುವಾರು ವಧೆ ಮಾಡಿ ಮಾಂಸ ಮಾಡಿಕೊಂಡು ಇಟ್ಟುಕೊಂಡಿದ್ದನು.
ಮಾಹಿತಿ ತಿಳಿದು ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಜಹೀರ್ ಹಾಗೂ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಮೊದಲನೇ ಆರೋಪಿ ಜಹೀರ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪೊಲೀಸ್ ಜಿಲ್ಲಾವರಿಷ್ಠಾಧಿಕಾರಿ ಎಮ್ ನಾರಾಯಣ, ಹೆಚ್ಚುವರಿ ಎಸ್ಪಿಗಳಾದ ಕೃಷ್ಣಮೂರ್ತಿ ಜಿ, ಜಗದೀಶ ನಾಯ್ಕ, ಡಿವೈಎಸ್ಪಿ ಗಣೇಶ ಕೆ.ಎಲ್, ಮಾರ್ಗದರ್ಶನದಲ್ಲಿ ಸಿಪಿಐ ಆರ್ ನೀಲಮ್ಮನವರ ನೇತ್ರತ್ವದಲ್ಲಿ ಪಿಎಸೈ ಪರಶುರಾಮ ಮಿರ್ಜಗಿ, ಹಾಗೂ ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿದ್ದರು.