ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯದ ವಕ್ತಾರ ಓರೆನ್ ಮಾರ್ಮೊರ್‌ಸ್ಟೈನ್ ಭಾರತಕ್ಕೆ ಬೆಂಬಲ ಸೂಚಿಸಿದ್ದಾರೆ.
ಇಸ್ರೇಲ್ ಭಾರತದ ಸ್ನೇಹಿತ, ಸ್ನೇಹಿತರು ಅಗತ್ಯದ ಸಮಯದಲ್ಲಿ ಪರಸ್ಪರ ಜೊತೆಗೆ ನಿಲ್ಲಲಿವೆ ಎಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಅವರು ಭಾರತವನ್ನು ಬೆಂಬಲಿಸಿ ಈ ಹೇಳಿಕೆ ನೀಡಿದ್ದಾರೆ.
ಇಸ್ರೇಲ್ ವಿದೇಶಾಂಗ ಸಚಿವ ಗಿಡಿಯಾನ್ ಸಾರ್, ಉಗ್ರರ ದಾಳಿಯ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಿಂದ ತೀವ್ರ ದುಃಖಿತನಾಗಿದ್ದೇನೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಭಾರತದೊಂದಿಗೆ ಜೊತೆಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.