ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೇಸ್ಬುಕ್ನಲ್ಲಿ ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಗೆ ಬೇರೆಯೇ ವ್ಯಾಖ್ಯಾನ ನೀಡಿದ ಆರೋಪದ ಮೇಲೆ ನಿಚ್ಚು ಮಂಗಳೂರು ವಿರುದ್ದ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ಎಂಬಲ್ಲಿ ರೈಲಿನಲ್ಲಿ ಮೂವರನ್ನು ಕೊಲ್ಲಲಾಗಿತ್ತು. ಕೊಲೆ ಆರೋಪಿ ಚೇತನ್ ಸಿಂಗ್ಗೆ ಸಾರ್ವಜನಿಕವಾಗಿ ಹಗ್ಗ ಹಾಕಿರಲಿಲ್ಲ. ಆ ಕಾರಣಕ್ಕೆ ಕಾಶ್ಮೀರದಲ್ಲಿ ಈ ಕೃತ್ಯ ನಡೆದಿದೆ ಎಂದು ನಿಚ್ಚು ಮಂಗಳೂರು ಫೇಸ್ಬುಕ್ ಪೋಸ್ಟ್ನಲ್ಲಿ ಬರೆದಿದ್ದಾರೆ ಎಂದು ಉಳ್ಳಾಲದ ವ್ಯಕ್ತಿಯೊಬ್ಬರು ನೀಡಿರುವ ದೂರಿನ ಅನ್ವಯ ಕೇಸ್ ದಾಖಲಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್, ನಿಚ್ಚು ಮಂಗಳೂರು ಎಂಬ ಖಾತೆಯ ಬಳಕೆದಾರರಿಂದ ಫೇಸ್ಬುಕ್ನಲ್ಲಿ ಪ್ರಚೋದನಕಾರಿ ಪೋಸ್ಟ್ಗೆ ಸಂಬಂಧಿಸಿದಂತೆ ಉಳ್ಳಾಲದ ನಿವಾಸಿ ಸತೀಶ್ ಕುಮಾರ್ ಅವರು ನೀಡಿದ ದೂರಿನ ಆಧಾರದ ಮೇಲೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.