ಪಹಲ್ಗಾಮ್‌ ಅಟ್ಯಾಕ್: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ NSE

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದು, ಮೃತರ ಕುಟುಂಬಕ್ಕೆ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (NSE) ₹1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದೆ.

ಈ ಘೋಷಣೆಯನ್ನು NSE ಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಶಿಶ್‌ಕುಮಾರ್ ಚೌಹಾನ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಚೌಹಾನ್ ತಮ್ಮ ಪೋಸ್ಟ್‌ನಲ್ಲಿ, ಕಾಶ್ಮೀರದಲ್ಲಿ ಏಪ್ರಿಲ್ 22, 2025 ರಂದು ನಡೆದ ದುರಂತ ಭಯೋತ್ಪಾದಕ ದಾಳಿಯಿಂದ ನಾವು ತೀವ್ರವಾಗಿ ಕಳವಳಗೊಂಡಿದ್ದೇವೆ. ಈ ದಾಳಿಯಲ್ಲಿ 26 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಉಗ್ರರ ದಾಳಿಗೆ ಮೃತ ಪಟ್ಟ ಕುಟುಂಬಗಳಿಗೆ ಈ ಕಷ್ಟದ ಸಮಯದಲ್ಲಿ ಸಹಾಯವಾಗಲೆಂದು, ಎನ್‌ಎಸ್‌ಇ ₹1 ಕೋಟಿಯನ್ನು ಒದಗಿಸುವ ಭರವಸೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!