February 1, 2026
Sunday, February 1, 2026
spot_img

ಸಂಸತ್ತಿನಲ್ಲಿಂದು ಆರ್ಥಿಕ ಹಬ್ಬ: ರಾಷ್ಟ್ರಪತಿ ಭೇಟಿ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2026ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುವ ಮುನ್ನ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.

ಬಜೆಟ್ ಮಂಡನೆಗೆ ಮುನ್ನ ರಾಷ್ಟ್ರಪತಿಗಳ ಔಪಚಾರಿಕ ಅನುಮೋದನೆ ಪಡೆಯುವುದು ಸಂಪ್ರದಾಯವಾಗಿದ್ದು, ಅದರಂತೆ ಸಚಿವರು ರಾಷ್ಟ್ರಪತಿಗಳನ್ನು ಭೇಟಿ ಮಾಡಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣವನ್ನು ಪ್ರಾರಂಭಿಸಲಿದ್ದಾರೆ. ದೇಶದ ಆರ್ಥಿಕತೆಗೆ ಸಂಬಂಧಿಸಿದ ಪ್ರಮುಖ ಘೋಷಣೆಗಳು ಮತ್ತು ತೆರಿಗೆ ರಿಯಾಯಿತಿಗಳ ಮೇಲೆ ಸಾರ್ವಜನಿಕರು ಹಾಗೂ ಉದ್ಯಮ ವಲಯ ತೀವ್ರ ಕುತೂಹಲದಿಂದ ಕಣ್ಣಿಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !