ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದಲ್ಲಿರುವ ರಷ್ಯಾದ ರಾಯಭಾರ ಕಚೇರಿಯು ರಷ್ಯಾ ನಾಗರಿಕರು ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ತಡೆಯುವಂತೆ ಶಿಫಾರಸು ಮಾಡಿದೆ. ಭಾರತ-ಪಾಕಿಸ್ತಾನ ಸಂಬಂಧಗಳನ್ನು ಮತ್ತಷ್ಟು ಹದಗೆಡಿಸಿದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಈ ಪ್ರಕಟಣೆ ಹೊರಡಿಸಲಾಗಿದೆ.
“ಪಾಕಿಸ್ತಾನ-ಭಾರತದ ಸಂಬಂಧಗಳಲ್ಲಿ ಹೊಸ ಬಿಕ್ಕಟ್ಟು ಎದುರಾದ ಹಿನ್ನೆಲೆಯಲ್ಲಿ, ಪರಿಸ್ಥಿತಿ ಸ್ಥಿರವಾಗುವವರೆಗೆ ರಷ್ಯಾದ ನಾಗರಿಕರು ಪಾಕಿಸ್ತಾನಕ್ಕೆ ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ತಡೆಯಬೇಕೆಂದು ನಾವು ಶಿಫಾರಸು ಮಾಡುತ್ತೇವೆ” ಎಂದು ರಷ್ಯಾದ ರಾಯಭಾರ ಕಚೇರಿ ಹೇಳಿದೆ.