ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಭಯಗೌಡ (13), ವೃಷಬೇಂದ್ರ (14) ಮೃತ ದುರ್ದೈವಿಗಳು. ಬಾಲಕರಿಬ್ಬರು ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ವೃಷಬೇಂದ್ರ ಎಂಬ ಬಾಲಕನ ಶವ ಪತ್ತೆಯಾಗಿದ್ದು, ಮತೋರ್ವ ಬಾಲಕನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.