ಹೊಸದಿಗಂತ ಡಿಜಿಟಲ್ ಡೆಸ್ಕ್;
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಬುಧವಾರ ನಡೆದ ಉಗ್ರರ ದಾಳಿಯ ಮತ್ತೊಂದು ಭಯಾನಕ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ವಿಡಿಯೋದಲ್ಲಿ ಬಂದೂಕುದಾರಿ ಉಗ್ರ ಬಿಳಿ ಶರ್ಟ್ ಧರಿಸಿದ್ದ ವ್ಯಕ್ತಿಗೆ ಪಾಯಿಂಟ್ ಬ್ಲಾಕ್ ನಲ್ಲಿ ಶೂಟ್ ಮಾಡಿದ್ದು, ಆ ಉಗ್ರ ಮುತ್ತೆ ಮುಂದೆ ಹೋಗಿ ಅಲ್ಲಿದ್ದ ಜನಸಮೂಹದ ಮೇಲೆ ಗುಂಡಿನ ದಾಳಿ ಮಾಡುತ್ತಾನೆ.ದಾಳಿ ವೇಳೆ ಕೆಲ ಮಕ್ಕಳು ಆಟವಾಡುತ್ತಿರುವುದು, ಚೀರಾಟ, ಕೂಗಾಟದ ಸದ್ದು ಕೇಳಿಬರುತ್ತದೆ.
ಈ ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿದಂತೆ 26 ಜನರು ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಭಾರತೀಯ ಭದ್ರತಾ ಪಡೆಗಳು ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ.