ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಜೆಟ್ ಮಂಡನೆಗೆ ಮುನ್ನ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ ಸಂಸತ್ ಭವನಕ್ಕೆ ಆಗಮಿಸಿದರು. ಬಜೆಟ್‌ಗೆ ಅಧಿಕೃತ ಅನುಮೋದನೆ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸಭೆಯ ನಂತರ, ಅವರು ಲೋಕಸಭೆಯಲ್ಲಿ ದೇಶದ ಆಯವ್ಯಯವನ್ನು ಮಂಡಿಸಲಿದ್ದಾರೆ.
ಸಾಂಪ್ರದಾಯಿಕ ಶೈಲಿಯ ‘ಬಹಿ-ಖಾತಾ’ದೊಂದಿಗೆ ಸಂಸತ್ತಿಗೆ ಬಂದ ಸಚಿವರ ಮೇಲೆ ಇಡೀ ದೇಶದ ಕಣ್ಣು ನೆಟ್ಟಿದೆ.



