ಚಂಡಮಾರುತ ಪರಿಣಾಮ ಇಂದಿನಿಂದ ಕರ್ನಾಟಕದಾದ್ಯಂತ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಕಳೆದ ಒಂದೆರಡು ವಾರಗಳಿಂದ ಸಾಕಷ್ಟು ಕಡೆ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದರೂ ಮಳೆಯ ಮುನ್ಸೂಚನೆ ನೀಡಿಲ್ಲ. ಕಳಸ, ಕಮ್ಮರಡಿ, ಶೃಂಗೇರಿ, ಗುಬ್ಬಿಯಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.