ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭದ್ರತಾ ಪಡೆಗಳ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದೆ. ಉಗ್ರರ ಮನೆಗಳನ್ನು ಧ್ವಂಸ ಮಾಡುತ್ತಿರುವ ಭದ್ರತಾ ಪಡೆಗಳು ಈಗ ಮತ್ತೊಬ್ಬ ಉಗ್ರನ ಮನೆಯನ್ನು ನಾಶಮಾಡಿದೆ.
ಬಂಡಿಪೋರಾದಲ್ಲಿ ಲಷ್ಕರ್-ಎ-ತೈಬಾ ಭಯೋತ್ಪಾದಕ ಜಮೀಲ್ ಅಹ್ಮದ್ನ ಮನೆಯನ್ನು ಭದ್ರತಾ ಪಡೆಗಳು ಸ್ಫೋಟಿಸಿವೆ. ಈ ಮೂಲಕ ಒಟ್ಟು 8 ಉಗ್ರರ ಮನೆಗಳನ್ನು ಧ್ವಂಸಗೊಳಿಸಲಾಗಿದೆ.
ಕಳೆದ ಮೂರು ದಿನಗಳಲ್ಲಿ ಜಿಲ್ಲಾ ಅಧಿಕಾರಿಗಳೊಂದಿಗೆ, ಭದ್ರತಾ ಪಡೆಗಳು ಕಣಿವೆಯಾದ್ಯಂತ ಹಲವಾರು ಭಯೋತ್ಪಾದಕರ ಮನೆಗಳನ್ನು ಧ್ವಂಸಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ.