ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಸಂಸತ್ತಿಗೆ ಆಗಮಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ದೇಶದ ಆಯವ್ಯಯವನ್ನು ಮಂಡಿಸಲಿದ್ದಾರೆ.
ದೇಶದ ಆರ್ಥಿಕತೆಯ ದೃಷ್ಟಿಯಿಂದ ಈ ಬಜೆಟ್ ಅತ್ಯಂತ ಮಹತ್ವದ್ದಾಗಿದ್ದು, ಸಾಮಾನ್ಯ ಜನರ ನಿರೀಕ್ಷೆಗಳು ಗಗನಕ್ಕೇರಿವೆ.



