ಹೊಸದಿಗಂತ ಡಿಜಿಟಲ್ ಡೆಸ್ಕ್:
ಸದ್ಯ ಟಾಲಿವುಡ್ನಲ್ಲಿ ಬಹು ಬೇಡಿಕೆಯ ನಟಿಯರಲ್ಲಿ ಮೊದಲ ಸ್ಥಾನದಲ್ಲಿ ಕನ್ನಡತಿ ಶ್ರೀಲೀಲಾ ಇದ್ದಾರೆ. ‘ಆಶಿಕಿ–3’ ನಲ್ಲಿ ಕಾರ್ತಿಕ್ ಆರ್ಯನ್ಗೆ ನಾಯಕಿಯಾಗಿರುವ ಈಕೆ ಬಾಲಿವುಡ್ನಲ್ಲಿ ಅವಕಾಶ ಪಡೆಯುತ್ತಿದ್ದಾರೆ.
ಇತ್ತೀಚಿಗೆ ಬಂದಿರೋ ಮಾಹಿತಿಯ ಪ್ರಕಾರ, ಲವರ್ ಬಾಯ್ ಸಿದ್ಧಾರ್ಥ್ ಮಲ್ಹೋತ್ರಾಗೆ ನಾಯಕಿಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.
ಈ ಹಿಂದೆ ‘ಡ್ರೀಮ್ ಗರ್ಲ್’ ಎಂಬ ಸಿನಿಮಾ ನಿರ್ದೇಶನದ ಮಾಡಿದ್ದ ರಾಜ್ ಶಾಂಡಿಲ್ಯ ಅವರು ಸಿದ್ಧಾರ್ಥ್ ಮಲ್ಹೋತ್ರಾಗೆ ಆ್ಯಕ್ಷನ್ ಕಟ್ ಹೇಳಲು ಮುಂದಾಗಿದ್ದು, ಕಮರ್ಷಿಯಲ್ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಈ ಸಂಬಂಧ ಶ್ರೀಲೀಲಾ ಜೊತೆ ಚಿತ್ರತಂಡ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.
ಮಹಾವೀರ್ ಜೈನ್ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಈ ವರ್ಷ ಸೆಪ್ಟೆಂಬರ್ನಿಂದ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ. ‘ಲೈಗರ್’ ಖ್ಯಾತಿಯ ನಟಿ ಅನನ್ಯಾ ಪಾಂಡೆ ಜೊತೆ ಕೂಡ ತಂಡ ಮಾತುಕತೆ ನಡೆಸಿದೆ ಎನ್ನಲಾಗಿದೆ.