ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಯುವ್ಯ ದೆಹಲಿಯ ರೋಹಿಣಿ ಪ್ರದೇಶದ ಜುಗ್ಗಿ ಕ್ಲಸ್ಟರ್ನ ಕೊಳೆಗೇರಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ
17ನೇ ಸೆಕ್ಟರ್ನಲ್ಲಿನ ನಿಕೇತನ ಅಪಾರ್ಟ್ಮೆಂಟ್ ಬಳಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿಭಾರೀ ಹೊಗೆ ಎದ್ದಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಇಲ್ಲಿಯವರೆಗೆ ಎರಡು ಶವಗಳನ್ನು ಹೊರತೆಗೆಯಲಾಗಿದೆ. ಸುತ್ತಲೂ ದಟ್ಟ ಹೊಗೆ ಎದ್ದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅವಘಡದಿಂದ 400ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟುಹೋಗಿವೆ. ಹಲವು ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಅಮಿತ್ ಗೋಯಲ್ ಹೇಳಿದರು.