October 7, 2026
Wednesday, October 7, 2026
spot_img

📊 | ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2026-27ನೇ ಸಾಲಿನ ಕೇಂದ್ರ ಬಜೆಟ್ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ದೊರೆತಿದೆ.

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು. ಕೇಂದ್ರ ಬಜೆಟ್ ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಪಡೆದಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಬಾರಿ ಮಂಡನೆ ಆಗುತ್ತಿರುವುದು ಮೋದಿ ಸರ್ಕಾರದ ಒಟ್ಟಾರೆ 15ನೇ ಬಜೆಟ್‌, ಮೋದಿ ಅವರ ಮೂರನೇ ಅವಧಿಯ ಎರಡನೇ ಪೂರ್ಣಾವಧಿ ಬಜೆಟ್‌ ಹಾಗೂ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ ಮಂಡಿಸುತ್ತಿರುವ ಒಂಬತ್ತನೇ ಬಜೆಟ್‌ ಆಗಿದ್ದು, ಸಂಸತ್ತಿನಲ್ಲಿ ಇನ್ನೇನು ಐದು ನಿಮಿಷಗಳಲ್ಲಿ ಬಜೆಟ್‌ ಮಂಡನೆ ಆರಂಭವಾಗಲಿದೆ.

Must Read