ಭಾರತ ಅಟ್ಯಾಕ್‌ ಮಾಡಿಬಿಟ್ರೆ?? ಯುದ್ಧದ ಭಯಕ್ಕೆ ಪಾಕ್‌ ಸೈನಿಕರಿಂದ ಸಾಮೂಹಿಕ ರಾಜೀನಾಮೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತದ ವಿರುದ್ಧ ಯುದ್ಧಕ್ಕೆ ತಯಾರಾಗಿದ್ದೀವಿ ಎಂದು ಹೊರಗಡೆ ಹೇಳಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ತನ್ನದೇ ಸೇನೆಯ ಸೈನಿಕರು ಶಾಕ್‌ ನೀಡುತ್ತಿದ್ದಾರೆ.

ಭಾರತ ಅಟ್ಯಾಕ್‌ ಮಾಡಿದರೆ ಎನ್ನುವ ಭಯಕ್ಕೆ ಸೈನಿಕರ ನಿದ್ದೆಹಾಳಾಗಿದ್ದು, ಸಾಮೂಹಿಕವಾಗಿಯೇ ರಾಜೀನಾಮೆ ನೀಡುತ್ತಿದ್ದಾರೆ ಎನ್ನಲಾಗಿದೆ.

ಕೇವಲ ಎರಡು ದಿನಗಳಲ್ಲಿ ಸುಮಾರು 5,000 ಅಧಿಕಾರಿಗಳು ಮತ್ತು ಸೈನಿಕರು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಭಾರತವು ಯಾವುದೇ ಕ್ಷಣದಲ್ಲಿ ಪ್ರಬಲ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಬಹುದು ಎಂಬ ಭಯದಿಂದ ಪಾಕಿಸ್ತಾನಿ ಸೈನಿಕರ ಕುಟುಂಬಗಳು ಉದ್ಯೋಗಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ ಎನ್ನಲಾಗಿದೆ.

ರಾಜೀನಾಮೆ ನೀಡುವವರ ಸಂಖ್ಯೆ ಜಾಸ್ತಿಯಾಗುತ್ತಿದ್ದಂತೆ ಪಾಕ್‌ ಸೇನೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಸೇನೆಯ ನಿಯಮವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪಾಕಿಸ್ತಾನ ಸೇನಾ ಕಾಯ್ದೆ(1952) ಅಡಿ ಕ್ರಮ ಜರುಗಿಸಲಾಗುವುದು ಎಂದು ವಾರ್ನಿಂಗ್‌ ನೀಡಿದ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!