ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆ 18 ಬಿಜೆಪಿ ಶಾಸಕರನ್ನು 6 ತಿಂಗಳು ಅಮಾನತು ಮಾಡಲಾಗಿತ್ತು. ಸದ್ಯ ಈ ವಿಚಾರವಾಗಿ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದ್ದು, 18 ಶಾಸಕರ ಅಮಾನತು ರದ್ಧುಪಡಿಸುವಂತೆ ಮನವಿ ಮಾಡಿದೆ.
ಈ ವಿಚಾರವಾಗಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರ ಅಮಾನತು ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಪ್ರಜಾಪ್ರಭುತ್ವ ವಿರೋಧಿ ನಡೆಯಿಂದ ರಾಜ್ಯ ಸರ್ಕಾರ ಹಿಂದಡಿ ಇಡಬೇಕು. ರಾಜ್ಯಪಾಲರು ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.