ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರ ಪ್ರದೇಶ ಕಾಣಿಪಾಕಂ ಸಮೀಪದ ತೋತಾಪಲ್ಲಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಮೃತಪಟ್ಟಿದ್ದಾರೆ.
ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಿಟಿಕಾ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ತಿರುಪತಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.