October 7, 2026
Wednesday, October 7, 2026
spot_img

📈 | ಬಯೋಫಾರ್ಮಾ ಕ್ಷೇತ್ರಕ್ಕೆ ಬಜೆಟ್ ಬೂಸ್ಟ್: 10,000 ಕೋಟಿ ಅನುದಾನ ಘೋಷಿಸಿದ ನಿರ್ಮಲಾ ಸೀತಾರಾಮನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಯೋಫಾರ್ಮಾ (ಜೈವಿಕ ಔಷಧ) ಕ್ಷೇತ್ರದ ಸರ್ವತೋಮುಖ ಬೆಳವಣಿಗೆಗಾಗಿ ಕೇಂದ್ರ ಸರ್ಕಾರವು 10,000 ಕೋಟಿ ರೂಪಾಯಿಗಳನ್ನು ಮೀಸಲಿಡಲು ಉದ್ದೇಶಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಉತ್ಪಾದಕತೆಯನ್ನು ಹೆಚ್ಚಿಸಲು ಮತ್ತು ಆರ್ಥಿಕ ಪ್ರಗತಿಯನ್ನು ವೇಗಗೊಳಿಸಲು ಸರ್ಕಾರವು ಸಮಗ್ರ ಸುಧಾರಣೆಗಳನ್ನು ಕೈಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಸುಮಾರು 350ಕ್ಕೂ ಹೆಚ್ಚು ಸುಧಾರಣೆಗಳನ್ನು ಜಾರಿಗೆ ತರಲಾಗಿದ್ದು, ನಮ್ಮ ಸರ್ಕಾರದ ‘ಸುಧಾರಣಾ ಎಕ್ಸ್‌ಪ್ರೆಸ್’ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಹೂಡಿಕೆಯು ದೇಶದ ಆರೋಗ್ಯ ಮೂಲಸೌಕರ್ಯ ಮತ್ತು ಸಂಶೋಧನಾ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವ ನಿರೀಕ್ಷೆಯಿದೆ.

Must Read