ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಹೊಸ ಎಲೆಕ್ಟ್ರಿಕ್ ವಾಹನ(EV) ನೀತಿಗೆ ಫಡ್ನವೀಸ್ ಸರಕಾರ ಅನುಮೋದನೆ ನೀಡಿದ್ದು, ಇದರಲ್ಲಿ ಪ್ರಯಾಣಿಕ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡಲಾಗುವುದು ಎಂದು ಹೇಳಿದೆ.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ರಾಜ್ಯದಲ್ಲಿ ಹೊಸ ಎಲೆಕ್ಟ್ರಿಕ್ ವಾಹನ ನೀತಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರ ಅಡಿಯಲ್ಲಿ ಪ್ರಯಾಣಿಕರ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಬಳಕೆ ಹೆಚ್ಚಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ . ಜೊತೆಗೆ ಕೆಲವು ಎಲೆಕ್ಟ್ರಿಕ್ ವಾಹನಗಳಿಗೆ ಟೋಲ್ ವಿನಾಯಿತಿ ನೀಡಲಾಗುವುದು ಎಂದರು.