ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಮೋಹನ್ ಭಾಗವತ್ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಮಂಗಳವಾರ ಸಂಜೆ ಮೂರು ಸೇನೆಯ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಮೋಹನ್ ಭಾಗವತ್ ಭೇಟಿಯಾಗಿ ಪ್ರಧಾನಿ ಜೊತೆ ಮಾತುಕತೆ ನಡೆಸಿದ್ದಾರೆ.
ಈ ಭೇಟಿಯ ಸಂದರ್ಭ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು. ಭಾಗವತ್ ಮೋದಿ ನಡುವಿನ ಈ ಭೇಟಿಯು ಮಹತ್ವ ಪಡೆದುಕೊಂಡಿದೆ.