ಕೋಲ್ಕತದ ಹೋಟೆಲ್​ನಲ್ಲಿ ಭಾರಿ ಅಗ್ನಿ ಅವಘಡ: 14 ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಕೊಲ್ಕತ್ತಾದ ಫಲಪತ್ತಿ ಮಚ್ಚುವಾ ಬಳಿಯ ಹೋಟೆಲ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ರಿತುರಾಜ್ ಹೋಟೆಲ್ ನ ಆವರಣದಲ್ಲಿ ರಾತ್ರಿ 8.15ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಇದುವರೆಗೆ 14 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ತಂಡಗಳು ಹಲವು ಮಂದಿಯನ್ನು ರಕ್ಷಿಸಿವೆ ಎಂದು ಕೊಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ತಿಳಿಸಿದ್ದಾರೆ.

ಇದೀಗ ಬೆಂಕಿ ನಿಯಂತ್ರಿಸಲಾಗಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ತನಿಖೆ ಪ್ರಗತಿಯಲ್ಲಿದ್ದು, ಇದಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ವಿವರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!