ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ ಮಾಡಿದ್ದಾರೆ.
ಖಾದಿ ಕೈಮಗ್ಗ ವಲಯವನ್ನು ತರಬೇತಿ, ಕೌಶಲ್ಯ, ಉತ್ಪಾದನೆ ಮತ್ತು ಗುಣಮಟ್ಟದ ಪರಿಶೀಲನೆಗಳೊಂದಿಗೆ ಉತ್ತೇಜಿಸಲು ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಸೀತಾರಾಮನ್ ಹೇಳಿದರು.



