ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾದದ್ರಿ ಭುವನಗಿರಿ ಜಿಲ್ಲೆಯ ಮೋಟಕೊಂಡೂರು ಮಂಡಲದ ಕೇಟೇಪಲ್ಲಿ ಗ್ರಾಮದಲ್ಲಿರುವ ಪ್ರೀಮಿಯರ್ ಎಕ್ಸ್‌ಪ್ಲೋಸಿವ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಸಂದೀಪ್, ನರೇಶ್ ಮತ್ತು ದೇವಿ ಚರಣ್ ಎಂದು ಗುರುತಿಸಲಾಗಿದ್ದು, ಎಲ್ಲರೂ ಮೋಟಕೊಂಡೂರು ಗ್ರಾಮದ ನಿವಾಸಿಗಳು ಎಂದು ತಿಳಿಸಿದ್ದಾರೆ.
ಮೋಟಕೊಂಡೂರು ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ ಪ್ರಕಾರ, ಪ್ರಕರಣ ದಾಖಲಾಗಿದ್ದು, ಸ್ಫೋಟದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಮೃತರ ಕುಟುಂಬಗಳು ಕಂಪನಿಯ ಹೊರಗೆ ಪ್ರತಿಭಟನೆ ನಡೆಸಿ, ಸಂತ್ರಸ್ತರಿಗೆ ನ್ಯಾಯ ಮತ್ತು ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.