ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ದೇಶದ ಒಳನಾಡು ಜಲಮಾರ್ಗಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದಾರೆ. ಈ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಸರ್ಕಾರ ಮುಂದಾಗಿದ್ದು, ಪ್ರಮುಖ ಘೋಷಣೆಗಳು ಇಲ್ಲಿವೆ:
ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತ 20 ಹೊಸ ರಾಷ್ಟ್ರೀಯ ಜಲಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗುವುದು.
ಉತ್ತರ ಪ್ರದೇಶದ ವಾರಣಾಸಿ ಮತ್ತು ಬಿಹಾರದ ಪಟ್ನಾದಲ್ಲಿ ಸುಸಜ್ಜಿತ ಹಡಗು ದುರಸ್ತಿ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲಾಗುವುದು.
ಸಮುದ್ರ ಮಾರ್ಗದ ಮೂಲಕ ಸರಕು ಸಾಗಣೆಯ ಪಾಲನ್ನು ಹೆಚ್ಚಿಸಲು ವಿಶೇಷ ‘ಕರಾವಳಿ ಕಾರ್ಗೋ ಸ್ಕೀಮ್’ ಜಾರಿಗೆ ತರಲಾಗುವುದು.
ಭಾರತದಲ್ಲಿಯೇ ಸೀ ಪ್ಲೇನ್ ಅಥವಾ ನೀರಿನ ಮೇಲೆ ಇಳಿಯುವ ವಿಮಾನಗಳ ತಯಾರಿಕೆಗೆ ಹೆಚ್ಚಿನ ಉತ್ತೇಜನ ಮತ್ತು ಬೆಂಬಲ ನೀಡಲಾಗುವುದು.



