ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಬಡವರಿಗೆ ಸರ್ಕಾರ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಆದರೆ ನಮ್ಮ ರಾಜ್ಯದ ಅಕ್ಕಿಯನ್ನು ನಾವೇ ತಿನ್ನುತ್ತಿದ್ದೇವಾ?
ಆದರೆ ಈ ಅನ್ನಭಾಗ್ಯ ಅಕ್ಕಿ ಬಡವರ ಬದಲಾಗಿ ಉಳ್ಳವರ ಪಾಲಾಗಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿರುವುದು ವಿಜಯಪುರದಲ್ಲಿ ಪತ್ತೆಯಾಗಿದೆ.
ವಿಜಯಪುರ ನಗರದ ಹೊರ ಭಾಗದ ಎನ್ಎಚ್ 50 ರಲ್ಲಿ ಆಹಾರ ಮತ್ತು ನಾಗರೀಕ ಇಲಾಖೆ ಆಧಿಕಾರಿಗಳು ದಾಳಿ ನಡೆಸಿ ಸುಮಾರು 40 ಟನ್ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ನೆರೆಯ ಬಾಗಲಕೋಟೆ ಜಿಲ್ಲೆಯಿಂದ ವಿಜಯಪುರ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತಿತ್ತು. 600 ಕ್ಕೂ ಅಧಿಕ ಪ್ಲಾಸ್ಟಿಕ್ ಮೂಟೆಗಳಲ್ಲಿ ಸಂಗ್ರಹಿಸಿ, ಲೋಡ್ ಮಾಡಿ ತಮಿಳುನಾಡು ರಾಜ್ಯದ ನೋಂದಣಿಯ ಲಾರಿಯಲ್ಲಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.