ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರಗಳಿಗೆ ಜಾತಿ ಜನಗಣತಿ ಮಾಡುವ ಅಧಿಕಾರ ಇಲ್ಲ. ಇದು ಗೊತ್ತಿದ್ರೂ ಸಿದ್ದರಾಮಯ್ಯ ಸರ್ಕಾರ ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಮುಂದಾಗಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಕೇಂದ್ರದಿಂದ ಜಾತಿ ಆಧಾರಿತ ಜನಗಣತಿ ನಡೆಸುವ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಹಳ ಉತ್ತಮ ನಿರ್ಧಾರ ತೆಗೆದುಕೊಂಡಿದೆ. ಜನಗಣತಿ ಜತೆಗೆ ಜಾತಿ ಜನಗಣತಿಯೂ ಮಾಡುವ ನಿರ್ಧಾರ ಮಾಡಲಾಗಿದೆ. 1931 ರ ನಂತರ ದೇಶದಲ್ಲಿ ಜಾತಿ ಜನಗಣತಿ ನಡೆದಿರಲಿಲ್ಲ.
ಎಲ್ಲ ಸಮುದಾಯಗಳಿಗೂ ನ್ಯಾಯ ಸಿಗಬೇಕು ಅನ್ನೋದು ಮೋದಿಯವರ ಉದ್ದೇಶ. ಎಲ್ಲರೂ ಈ ನಿರ್ಧಾರ ಸ್ವಾಗತ ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿ ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ ಕಾಂಗ್ರೆಸ್ ಮಾಡ್ತಿದೆ. ಕೇಂದ್ರದ ನಿರ್ಧಾರ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೂ ಅಚ್ಚರಿ ತಂದಿದೆ ಎಂದರು.