March 18, 2026
Wednesday, March 18, 2026
spot_img

📈 | ಇನ್ಮುಂದೆ ಹೈಟೆಕ್‌ ಆಗಿ ಕಾಣಲಿವೆಯಂತೆ ಜಿಲ್ಲಾ ಆಸ್ಪತ್ರೆಗಳು, ಇದಕ್ಕಾಗಿ ಸಿಕ್ತಿರೋ ಅನುದಾನ ಎಷ್ಟು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಒಂಬತ್ತನೇ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಜಿಲ್ಲಾಸ್ಪತ್ರೆಗಳ ಬಗ್ಗೆ ಬೃಹತ್‌ ಘೋಷಣೆಯೊಂದನ್ನು ಮಾಡಿದ್ದಾರೆ.

ಆರೋಗ್ಯ ಕ್ಷೇತ್ರದ ಕುರಿತು ಹಣಕಾಸು ಸಚಿವರು ಪ್ರಮುಖ ಘೋಷಣೆ ಮಾಡಿದ್ದಾರೆ. ದೇಶವಾಸಿಗಳಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಮತ್ತು ಆಘಾತ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾಸ್ಪತ್ರೆಗಳಲ್ಲಿ ಉಂಟಾಗುವ ಕೊರತೆಗಳನ್ನು ನೀಗಿಸಿ ಎಲ್ಲ ಆಸ್ಪತ್ರೆಗಳು ಹೈಟೆಕ್‌ ಆಗಿ ಕಾಣುವಂತೆ ಮಾಡಲಾಗುತ್ತದೆ. ಅಂತೆಯೇ ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !