ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ನಗರದ ಹೊರವಲಯ ಬಜಪೆ ಕಿನ್ನಿಪದವು ಎಂಬಲ್ಲಿ ಗುರುವಾರ ರಾತ್ರಿ ನಡೆದ ಹಿಂದು ಕಾರ್ಯಕರ್ತ ಸುಹಾಸ್ ಬರ್ಬರ ಹತ್ಯೆ ಖಂಡಿಸಿ ಇಂದು ವಿಹಿಂಪ, ಬಜರಂಗದಳ ಸಹಿತ ಹಿಂದು ಸಂಘಟನೆಗಳು ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಕರೆ ನೀಡಿದೆ.
ಸದ್ಯ ಕರಾವಳಿ ಬೂದಿಮುಚ್ಚಿದ ಕೆಂಡದಂತಿದ್ದು, ಮುನ್ನಚ್ಚರಿಕಾ ಕ್ರಮವಾಗಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 2ರ ಮುಂಜಾನೆಯಿಂದ ಮೇ6ರ ಮುಂಜಾನೆ ತನಕ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶದಲ್ಲಿ ತಿಳಿಸಿದ್ದಾರೆ.