SSLC RESULT | ಟಾಪ್‌ಲ್ಲಿ ಬಂದ ಕರಾವಳಿ, ಹೆಣ್ಮಕ್ಕಳಿಗೇ ಫಸ್ಟ್‌ ಪ್ಲೇಸ್‌, ಫುಲ್‌ ಡೀಟೇಲ್ಸ್‌ ಇಲ್ಲಿದೆ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಈ ವರ್ಷ ಶೇ. 91.12ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಶೇ.89.96ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಹಾಗೂ ಶೇ. 42.43 ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ.

2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿಯೂ ಹೆಣ್ಣುಮಕ್ಕಳದ್ದೇ ಮೇಲುಗೈ ಸಾಧಿಸಿದ್ದಾರೆ. ಹೆಣ್ಣುಮಕ್ಕಳು ಶೇಕಡ 74, ಗಂಡು ಮಕ್ಕಳು ಶೇಕಡ 58.07. ಒಟ್ಟಾರೆಯಾಗಿ ಈ ಬಾರಿ ಪರೀಕ್ಷೆಗೆ 8,42,173 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಈ ಪೈಕಿ 5,24,984 ವಿದ್ಯಾರ್ಥಿಗಳು ಉತ್ತೀತರ್ಣರಾಗಿದ್ದರೆ, 3,17,189 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.

ಇನ್ನು ಈ ಬಾರಿ 22 ವಿದ್ಯಾರ್ಥಿಗಳು ಔಟ್‌ ಆಫ್‌ ಔಟ್‌ ಅಂಕ ಪಡೆದಿದ್ದಾರೆ. ಈ ಬಾರಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಶುಭಾಷಯಗಳು, ಹಾಗೇ ಫೇಲ್‌ ಆದ ವಿದ್ಯಾರ್ಥಿಗಳಿಗೂ ಶುಭಾಷಯಗಳು, ಲೈಫ್‌ನಲ್ಲಿ ಸೋತಿಲ್ಲ ಪರೀಕ್ಷೆಯಲ್ಲಿ ಅಷ್ಟೇ. ಚಾಲೆಂಜ್‌ ಆಗಿ ತೆಗೆದುಕೊಂಡು ಮತ್ತೊಮ್ಮೆ ಪರೀಕ್ಷೆ ಬರೆದು ಪಾಸಾಗಿ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!