ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸವನಬಾಗೇವಾಡಿ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕರಿಸಿದ್ದಾರೆ.
ವಿಜಯಮರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ.
ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಆದುದರಿಂದ, ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ ಎಂದು ಸ್ಪೀಕರ್ ಯುಟಿ ಖಾದರ್ಗೆ ಬರೆದ ಪತ್ರದಲ್ಲಿ ಶಿವಾನಂದ ಪಾಟೀಲ್ ಉಲ್ಲೇಖಿಸಿದ್ದಾರೆ.
ಈ ಶಾಸಕದ್ವಯರು ಚುನಾವಣಾ ವೆಚ್ಚದ ಅಆಇಈ ಗೊತ್ತಿಲ್ಲವರಂತೆ
ಅಥವಾ ರಾಜಕೀಯವನ್ನು ಮಕ್ಕಳಾಟವೆಂದು ಪರಿಗಣಿಸಿದ್ದಾರೆ. ಇವರಿಬ್ಬರಿಗೂ ರಾ.ಕ್ಷೇ. ಮತ್ತು ಚುನಾಯಿತ ಪ್ರತಿನಿಧಿಗಳ ಸ್ಥಾನ ಲಾಭದಾಯಕ ದಂಧೆಯಿರಬಹುದು.ಈ ಭಂಢತನಕ್ಕೆ ಮುಂದಿನ ದಿನಗಳಲ್ಲಿ ಸರಿಯಾದ ಬೆಲೆ ತೆರುವ ಕ್ಷಣಗಳನ್ನು ಮತದಾರ ಪ್ರಭು ದಯಪಾಲಿಸಲೇಬೇಕು.