ಹೊಸದಿಗಂತ ಡಿಜಿಟಲ್ ಡೆಸ್ಕ್:
IPL 18ನೇ ಆವೃತ್ತಿಯ ಟೂರ್ನಿಯಲ್ಲಿ ಮೊದಲ ತಂಡವಾಗಿ ಪ್ಲೇ ಆಫ್ ರೇಸ್‌ನಿಂದ ಚೆನ್ನೈ ಸೂಪರ್ ಕಿಂಗ್ಸ್ ಹೊರಬಿದ್ದಿದೆ.
ಇದರ ಬೆನ್ನಲ್ಲೇ ಮಹೇಂದ್ರ ಸಿಂಗ್ ಧೋನಿ, ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕರ ಜತೆ ಮಾತುಕತೆ ನಡೆಸುವ ಫೋಟೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಚೆನ್ನೈ ಮತ್ತು ಪಂಜಾಬ್ ನಡುವಿನ ಪಂದ್ಯದ ನಂತರ ಧೋನಿ, ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಜೊತೆ ದೀರ್ಘ ಚರ್ಚೆ ನಡೆಸಿದರು. ಆದರೆ ಈ ಚರ್ಚೆ ಯಾವುದರ ಕುರಿತಾಗಿತ್ತು ಎನ್ನುವ ಮಾಹಿತಿ ಇನ್ನೂ ಹೊರಬಿದ್ದಿಲ್ಲ.
ಈ ಬಾರಿ ಟೂರ್ನಿಯಲ್ಲಿ ಆಡಿರುವ 10 ಪಂದ್ಯಗಳ ಪೈಕಿ 8ರಲ್ಲಿ ಸೋಲನುಭವಿಸಿದ 5 ಬಾರಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇ-ಆಫ್ ರೇಸ್‌ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಸೋಲು ಕಂಡ ತಂಡ, ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲೇ ಬಾಕಿಯಾಯಿತು.