ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹಂತಕರು ಯಾರೇ ಇರಲಿ, ಶೀಘ್ರದಲ್ಲಿ ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗುತ್ತೆ ಎಂದು ತಿಳಿಸಿದರು.
ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಪಟ್ಟಂತೆ ನಿನ್ನೆಯೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರಿಗೆ ಮಂಗಳೂರಿಗೆ ಹೋಗಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಕೊಲೆ ಯಾರದ್ದೇ ಆಗಿರಲಿ, ಯಾವ ಕಾರಣಕ್ಕೆ ಆಗಿರಲಿ, ನಮಗೆ ಪ್ರತಿ ಜೀವವೂ ಮುಖ್ಯ. ಈ ಹೀನ ಕೃತ್ಯ ಎಸಗಿರುವ ಅಪರಾಧಿಗಳ ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಹೇಳಿದ್ದಾರೆ.