ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್‌ಐಎಗೆ ಒಪ್ಪಿಸಿ: ಅಮಿತ್ ಶಾಗೆ ಕ್ಯಾ. ಚೌಟ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ತಕ್ಷಣವೇ ಎನ್‌ಐಎ ತನಿಖೆಗೆ ಒಳಪಡಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ದಿಗ್ಭ್ರಮೆ ಮೂಡಿಸಿದೆ. ಈ ಘಟನೆ, ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಹೆಚ್ಚುತ್ತಿರುವ ಆಡಳಿ ವೈಫಲ್ಯಕ್ಕೆ ಕನ್ನಡಿಯಾಗಿದೆ. ಜೊತೆಗೆ ಬಲಗೊಳ್ಳುತ್ತಿರುವ ಇಸ್ಲಾಮಿಕ್ ಮೂಲಭೂತವಾದ, ರಾಷ್ಟ್ರ ವಿರೋಧಿ ಶಕ್ತಿಗಳ ಅಟ್ಟಹಾಸಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಈ ಹಿಂದೆ ಪಿಎಫ್ಐ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತ ಸುಳ್ಯದ ಪ್ರವೀಣ್ ನೆಟ್ಟಾರು ಅವರ ಹತ್ಯೆ ನಡೆದಿತ್ತು. ಪಿಎಫ್ಐ ನಿಷೇಧದ ಬಳಿಕವೂ ಈಗ ಅದೇ ಮಾದರಿಯಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆಯಾಗಿದೆ. ಇದು ಈ ಭಾಗದಲ್ಲಿ ಪಿಎಫ್‌ಐನಂತಹ ಮೂಲಭೂತವಾದಿ ಸಂಘಟನೆಗಳು ಇನ್ನೂ ಸ್ಲೀಪರ್ ಸೆಲ್‌ನಂತೆ ಜೀವಂತವಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ.

ತಮ್ಮ ಮಗನನ್ನು ಕಳೆದುಕೊಂಡಿರುವ ಸುಹಾಸ್ ಶೆಟ್ಟಿ ಅವರ ಕುಟುಂಬವು ದಿಗ್ಭ್ರಾಂತಗೊಂಡು ನ್ಯಾಯಕ್ಕಾಗಿ ಕಾಯುತ್ತಿದೆ. ಈ ಭಾಗದ ಚುನಾಯಿತ ಪ್ರತಿನಿಧಿಯಾಗಿ ಮತ್ತು ಇಲ್ಲಿನ ನೋವು ಹಾಗೂ ಹತಾಶೆಯನ್ನು ವೈಯಕ್ತಿಕವಾಗಿ ಕಂಡಿರುವ ವ್ಯಕ್ತಿಯಾಗಿ, ಈ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಈ ಕೂಡಲೇ ಎನ್‌ಐಎಗೆ ಹಸ್ತಾಂತರಿಸಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

https://x.com/CaptBrijesh/status/1918186966648275118

ಸುಹಾಸ್ ಶೆಟ್ಟಿ ಹತ್ಯೆ ಸಂಬಂಧ ಕೇಂದ್ರ ಗೃಹಸಚಿವ ಅಮಿತ್ ಶಾ ಮಧ್ಯಪ್ರವೇಶಿಸಿ, ಕೇವಲ ಅಪರಾಗಳು ಮಾತ್ರವಲ್ಲದೆ ಅವರಿಗೆ ಬೆಂಬಲ ನೀಡಿದ ಮತ್ತು ಹಣಕಾಸು ನೆರವು ನೀಡಿದ ಎಲ್ಲರನ್ನೂ ತ್ವರಿತವಾಗಿ ನ್ಯಾಯದ ಮುಂದೆ ತರಲು ಕ್ರಮ ಕೈಗೊಳ್ಳಬೇಕೆಂದು ಕೂಡಾ ಅವರು ವಿನಂತಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!