ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 8 ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವರು ಎಂದು ಗುರುತಿಸಲಾಗಿದ್ದು, ಮಂಗಳೂರಿನ ನಟೋರಿಯಸ್ ಸಫ್ವಾನ್ ಗ್ಯಾಂಗ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಸದ್ಯ ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಮಂಗಳೂರು ಪೊಲೀಸರು ಎಂಟು ಮಂದಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.