ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಪಾಕಿಸ್ತಾನಕ್ಕೆ ರಾಜತಾಂತ್ರಿಕ ನಿರ್ಧಾರಗಳು ಹಾಗೂ ಇತರ ಕೆಲವು ಕಠಿಣ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮರ್ಮಾಘಾತ ನೀಡಿದೆ.
ಇದರ ನಡುವೆ ಪಾಕ್ ಸಚಿವರೊಬ್ಬರ ಭಾರತ ಶ್ರೀಘ್ರದಲ್ಲಿ ದಾಳಿಯನ್ನು ಮಾಡುತ್ತದೆ ಎಂಬ ಹೇಳಿಕೆಯನ್ನು ಸಾರ್ವಜನಿಕವಾಗಿ ನೀಡಿದ್ದರು, ಇದೀಗ ಆ ಸಚಿವನ ಸಾಮಾಜಿಕ ಮಾಧ್ಯಮ ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ.
ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಅತಾವುಲ್ಲಾ ತರಾರ್ ಅವರ ಎಕ್ಸ್ ಖಾತೆಯನ್ನು ತಡೆಯಿಡಿಯಲಾಗಿದೆ.
ಬೆಳಗಿನ ಜಾವ 2 ಗಂಟೆಗೆ ಪತ್ರಿಕಾಗೋಷ್ಠಿ ಕರೆದು ಭಾರತ ಮುಂದಿನ 24-36 ಗಂಟೆಗಳಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಯೋಜಿಸುತ್ತಿದೆ ಎಂಬ ಹೇಳಿದ್ದರು.
ಈಗಾಗಲೇ ಭಾರತ ಪಾಕಿಸ್ತಾನದ ಹನಿಯಾ ಅಮೀರ್, ಮಹಿರಾ ಖಾನ್ ಮತ್ತು ಅಲಿ ಜಾಫರ್ ಸೇರಿದಂತೆ ಪಾಕಿಸ್ತಾನಿ ನಟರ ಇನ್‌ಸ್ಟಾಗ್ರಾಮ್ ಖಾತೆಗಳನ್ನು ನಿರ್ಬಂಧಿಸಲಾಗಿದೆ.ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಯೂಟ್ಯೂಬ್ ಚಾನೆಲ್‌ಗಳು ಮತ್ತು ಡಾನ್ ನ್ಯೂಸ್, ಇರ್ಷಾದ್ ಭಟ್ಟಿ, SAMAA ಟಿವಿ, ARY ನ್ಯೂಸ್ ಮತ್ತು ಜಿಯೋ ನ್ಯೂಸ್ ಸೇರಿದಂತೆ ದೇಶದ ಸುದ್ದಿವಾಹಿನಿಗಳನ್ನು ಸಹ ನಿರ್ಬಂಧಿಸಲಾಗಿದೆ.