ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಗೋವಾದ ಲೈರೈ ದೇವಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿ, 70 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಈ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಪಣಜಿಯಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಶಿರ್ಗಾವೊ ಗ್ರಾಮದಲ್ಲಿರುವ ಶ್ರೀ ಲೈರೈ ದೇವಿ ದೇವಾಲಯದಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಕಾಲ್ತುಳಿತ ಸಂಭವಿಸಿದೆ.
ಈ ಕುರಿತು X ನಲ್ಲಿ ಪೋಸ್ಟ್ ಮಾಡಿದ ಸಿಎಂ, ‘ಶಿರ್ಗಾಂವ್ ಉತ್ಸವದಲ್ಲಿ ನಡೆದ ಘಟನೆಯನ್ನು ಕೂಲಂಕಷವಾಗಿ ತನಿಖೆ ಮಾಡಲು ನ್ಯಾಯಾಂಗ ತನಿಖೆ ನಡೆಸಲಾಗುವುದು. ಸಂಪೂರ್ಣ ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಾನು ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ಕರೆಯುತ್ತೇನೆ’ ಎಂದು ತಿಳಿಸಿದ್ದಾರೆ.