ಹೊಸದಿಗಂತ ಡಿಜಿಟಲ್ ಡೆಸ್ಕ್:
2026-27ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರಕ್ಷಣಾ ಸಚಿವಾಲಯಕ್ಕೆ ಬರೋಬ್ಬರಿ ₹7.8 ಲಕ್ಷ ಕೋಟಿ ಹಣವನ್ನು ಮೀಸಲಿಡಲಾಗಿದೆ. ಇದರಲ್ಲಿ ವಿಶೇಷವಾಗಿ ಸಶಸ್ತ್ರ ಪಡೆಗಳ ಆಧುನೀಕರಣಕ್ಕಾಗಿ ₹2.19 ಲಕ್ಷ ಕೋಟಿ ಅನುದಾನವನ್ನು ಘೋಷಿಸಲಾಗಿದೆ.
ಭಾರತದ ಮಿಲಿಟರಿ ಶಕ್ತಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಕ್ಷಣಾ ಸಚಿವಾಲಯವು ಹಲವಾರು ಪ್ರಮುಖ ಯೋಜನೆಗಳನ್ನು ಹಮ್ಮಿಕೊಂಡಿದೆ. ಇದರಲ್ಲಿ ಅತ್ಯಾಧುನಿಕ ರಫೇಲ್ ಯುದ್ಧ ವಿಮಾನಗಳು, ಶಕ್ತಿಯುತ ಜಲಾಂತರ್ಗಾಮಿಗಳು ಮತ್ತು ಸುಧಾರಿತ ಡ್ರೋನ್‌ಗಳ ಖರೀದಿ ಒಪ್ಪಂದಗಳು ಸೇರಿವೆ. ಈ ಬೃಹತ್ ಹೂಡಿಕೆಯು ದೇಶದ ರಕ್ಷಣಾ ವ್ಯವಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಶಕ್ತಿಯುತಗೊಳಿಸಲಿದೆ.



