ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾ.ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಗದು ಪತ್ತೆ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ನೇಮಿಸಿದ್ದ ಮೂವರು ನ್ಯಾಯಾಧೀಶರ ತನಿಖಾ ಸಮಿತಿಯು ಸೋಮವಾರ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೆ ವರದಿ ಸಲ್ಲಿಸಿದೆ.
ಮಾರ್ಚ್ 14 ರಂದು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮಾರ್ಚ್ 25 ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್ ಅವರನ್ನು ಒಳಗೊಂಡ ಮೂವರು ಸದಸ್ಯರ ತನಿಖಾ ಸಮಿತಿ ರಚಿಸಿತ್ತು.
ಸಮಿತಿಯು ಮೇ 3 ರಂದು ತನ್ನ ವರದಿಯನ್ನು ಪೂರ್ಣಗೊಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್ಗೆ ತನಿಖಾ ವರದಿ ಸಲ್ಲಿಕೆಯಾಗಿದೆ.