ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆ ಎದ್ದು ಮೊಬೈಲ್ ನೋಡಿದ ಭಾರತೀಯರಿಗೆ ನೆಮ್ಮದಿಯ ಗುಡ್‌ಮಾರ್ನಿಂಗ್ ಸಿಕ್ಕಿದೆ. ಮಧ್ಯರಾತ್ರಿ ಪಾಕ್ ಹಾಗೂ ಪಿಒಕೆ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕೇವಲ 23 ನಿಮಿಷಗಳ ದಾಳಿ ಇದಾಗಿದ್ದರೂ ಪವರ್‌ಫುಲ್ ದಾಳಿಗೆ 80ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ.ತಡರಾತ್ರಿ 1:44 ಗಂಟೆ ವೇಳೆಗೆ ಪಾಕ್ ಉಗ್ರರ ಅಡಗುತಾಣಗಳ ಮೇಲೆ ರಫೇಲ್ ಇನ್ನಿತರ ಫೈಟರ್‌ಜೆಟ್‌ಗಳಿಂದ ದಾಳಿ ನಡೆಸಿದ ಭಾರತೀಯ ಸೇನೆ ರಾತ್ರಿ 2:07 ವೇಳೆಗೆ ಕಾರ್ಯಾಚರಣೆ ಮುಗಿಸಿತ್ತು. ದಾಳಿ ನಡೆಸಿದ ಬಳಿಕ ಭಾರತೀಯ ಸೇನೆಯ ಜೆಟ್‌ಗಳು ಸೇಫ್ ಆಗಿ ಮರಳಿವೆ. ಇನ್ನೂ ಈ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ, ಜೊತೆಗೆ ಲಷ್ಕರ್ ಉಗ್ರರಿಗೆ ತರಬೇತಿ ನೀಡಿದ್ದ ಸುಬಾನಲ್ಲಾಹ್ ಮಸೀದಿ ಸೇರಿದಂತೆ ಪ್ರಮುಖ ತಾಣಗಳು ಧ್ವಂಸವಾಗಿದೆ.
ಸದ್ಯ ಪಾಕಿಸ್ತಾನದಲ್ಲಿನ 9ಕ್ಕೂ ಹೆಚ್ಚು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವಿಷಯದಲ್ಲಿ ಸೇನೆಗಳಿಗೆ ಭಾರತ್ ಸರ್ಕಾರ ಪರಮಾಧಿಕಾರ ನೀಡಿದೆ. ʻMock Drill’ಗೆ ಸೂಚನೆ ಬಂದ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ಭಾರತ ಸೇನೆಗಳು ಅಧಿಕೃತವಾಗಿ ಕಾರ್ಯಾಚರಣೆಗೆ ಇಳಿದಿವೆ. ಅತ್ತ ಪಾಕಿಸ್ತಾನದ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಸೇನಾ ಚಟುವಟಿಕೆಗಳು ಬಿರುಸುಪಡೆದುಕೊಂಡಿವೆ.